ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ದೇಹ ವೈದ್ಯಕೀಯ ಕಾಲೇಜಿಗೆ ದಾನ: ಕುಟುಂಬಸ್ಥರ ತೀರ್ಮಾನ
Update: 2022-03-19 11:59 IST
ಹಾವೇರಿ: ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಅವರ ಮೃತದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ನವೀನ್ ತಂದೆ ಶೇಖರಪ್ಪ , ಮೃತದೇಹವನ್ನು ದಾವಣಗೆರೆಯ ಎಸ್.ಎಸ್ ಮೆಡಿಕಲ್ ಕಾಲೇಜಿಗೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಹಾಯವಾಗಲು ನೀಡುವುದಾಗಿ ಹೇಳಿದ್ದಾರೆ.
ಇನ್ನು ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ: ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್ ಪಾರ್ಥಿವ ಶರೀರ ಮಾ.21ಕ್ಕೆ ಬೆಂಗಳೂರಿಗೆ: ಮುಖ್ಯಮಂತ್ರಿ ಬೊಮ್ಮಾಯಿ