×
Ad

'ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ' ಕಾರ್ಯಕ್ರಮಕ್ಕೆ ಸುರಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

Update: 2022-03-19 13:34 IST

ಸುರಪುರ, ಮಾ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾದಗಿರಿ ಜಿಲ್ಲೆಯ  ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಇದೇ ಸಂದರ್ಭದಲ್ಲಿ ಸುರಪುರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಪೂರ್ಣಗೊಂಡ ಯೋಜನೆಗಳ ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ, ಪ್ರಭು ಚವ್ಹಾಣ್, ರಾಯಚೂರು ಲೋಕಸಭಾ ಸದಸ್ಯ ಅಮರೇಶ ನಾಯಕ್, ಶಾಸಕರಾದ ರಾಜೂಗೌಡ, ಶರಣಬಸಪ್ಪ ದರ್ಶನಾಪೂರ, ಜಿಲ್ಲಾಧಿಕಾರಿ ರಾಗಪ್ರಿಯಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News