ವ್ಯಾಪಾರ ವಹಿವಾಟು ನಡೆಸಲು ಬೆದರಿಕೆ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ
Update: 2022-03-19 14:23 IST
ಉಡುಪಿ : ಈ ದೇಶದಲ್ಲಿ ಎಲ್ಲರೂ ಸ್ವತಂತ್ರರು, ನಮ್ಮದು ಸ್ವತಂತ್ರ ಭಾರತ ದೇಶ. ಯಾರು ಯಾರಿಗೂ ಬೆದರಿಕೆ ಹಾಕುವಂತಿಲ್ಲ. ವ್ಯಾಪಾರ ವಹಿವಾಟು ನಡೆಸಲು ಬೆದರಿಕೆ ಹಾಕುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಉಡುಪಿಯ ಹಿರಿಯಡ್ಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪತ್ರಕರ್ತರು ʼಮುಸಲ್ಮಾನ ವ್ಯಾಪಾರಿಗಳಿಗೆ ಹಿಂದುತ್ವ ಸಂಘಟನೆಗಳಿಂದ ವಿರೋಧ, ದೇವಸ್ಥಾನ, ಜಾತ್ರೆ ಕಾರ್ಯಕ್ರಮಗಳಲ್ಲಿ ವ್ಯಾಪಾರ ನಡೆಸಲು ವಿರೋಧ, ಕರಾವಳಿ ಮತ್ತು ಮಲೆನಾಡಿನ ಧಾರ್ಮಿಕ ಕೇಂದ್ರಗಳಲ್ಲಿ ವಿರೋಧ, ಹಿಜಾಬ್ ವಿವಾದ ನಂತರ ಮುಸಲ್ಮಾನ ವ್ಯಾಪಾರಿಗಳಿಗೆ ವಿರೋಧದ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಪ್ರಶ್ನಿಸಿದಾಗ ಈ ಮೇಲಿನಂತೆ ಅವರು ಹೇಳಿಕೆ ನೀಡಿದರು.