×
Ad

ಪಾವಗಡ ಬಸ್ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

Update: 2022-03-19 16:15 IST
photo- twitter 

ತುಮಕೂರು: ಜಿಲ್ಲೆಯ ಪಾವಗಡ ಸಮೀಪ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟಿರುವವರ ಕುಟುಭಕ್ಕೆ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. 

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿದ್ದೇನೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದೇವೆ ಎಂದು ತಿಳಿಸಿದರು. 

ಇನ್ನು ವೈಯಕ್ತಿಕವಾಗಿ ಮೃತರ ಕುಟುಂಭಗಳಿಗೆ 1 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ಇದೇ ವೇಳೆ ಸಚಿವ ಶ್ರೀರಾಮುಲು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News