×
Ad

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ವ ಪ್ರಯತ್ನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2022-03-19 18:01 IST

ಯಾದಗಿರಿ, ಮಾ. 19: ‘ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗೆ ರಾಜ್ಯ ಸರಕಾರ ಸರ್ವ ರೀತಿಯಲ್ಲಿಯೂ ಪ್ರಯತ್ನ ಮಾಡುತ್ತದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹೆಲಿಪ್ಯಾಡ್ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ರೂ. ಅನುದಾನ ನೀಡಿದ್ದು, ವಲಯವಾರು ಶಿಕ್ಷಣ, ಆರೋಗ್ಯ, ಅಪೌಷ್ಟಿಕತೆಗೆ ಪ್ರತ್ಯೇಕವಾಗಿ ಅನುದಾನ ನೀಡಿದೆ ಎಂದು ಹೇಳಿದರು.

ಜೊತೆಗೆ ಎಸ್‍ಡಿಪಿ ಅಡಿ ಡಾ.ನಂಜುಂಡಪ್ಪ ವರದಿ ಪ್ರಕಾರ ನೀಡಬೇಕಾಗುತ್ತದೆ. ಸಂಪುಟ ಉಪಸಮಿತಿ ರಚಿಸಿದ್ದು, ಅದರ ಶಿಫಾರಸ್ಸಿನಂತೆ ಅನುದಾನ ನೀಡಲಾಗುವುದು. ಯಾದಗಿರಿ ಜಿಲ್ಲೆಯಲ್ಲಿ 1 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸಿಲಿಂಡರ್ ಸ್ಪೋಟದಿಂದ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಲಾಗುವುದು. ಅಭಿವೃದ್ಧಿ ಪ್ರಾರಂಭಿಸುವ ದೃಷ್ಟಿಯಿಂದ ಇಲ್ಲಿಗೆ ಬಂದಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

‘ಶಾಲಾ ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ತಿಳಿಸುವ ಸಲುವಾಗಿ ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರ್ಪಡೆ ಮಾಡುವ ಬಗ್ಗೆ ಚಿಂತಿಸಲಾಗುತ್ತಿದೆ. ಇದರ ರೂಪುರೇಷೆಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು' ಎಂದು ಅವರು, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News