ರಾಜ್ಯದಲ್ಲಿ ಶನಿವಾರ 173 ಮಂದಿಗೆ ಕೊರೋನ ದೃಢ; ಇಬ್ಬರು ಮೃತ್ಯು

Update: 2022-03-19 15:22 GMT

ಬೆಂಗಳೂರು, ಮಾ.19: ರಾಜ್ಯದಲ್ಲಿ ಶನಿವಾರ 173 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 2 ಮಂದಿ ಸೋಂಕಿಗೆ ಬಲಿಯಾಗಿದ್ದು, 153 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,44,605ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,035ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 2,031ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರ ಸಾವು: ಬಳ್ಳಾರಿ 1, ಬೆಂಗಳೂರು ನಗರ 1 ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 173 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 5, ಬೆಂಗಳೂರು ನಗರ 138, ಚಿಕ್ಕಬಳ್ಳಾಪುರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 8, ದಕ್ಷಿಣ ಕನ್ನಡ 2, ಧಾರವಾಡ 1, ಹಾವೇರಿ 1, ಕಲಬುರಗಿ 1, ಕೋಲಾರ 3, ಮಂಡ್ಯ 1, ಮೈಸೂರು 5, ಶಿವಮೊಗ್ಗ 2, ತುಮಕೂರು ಜಿಲ್ಲೆಯಲ್ಲಿ ಎರಡು ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 138 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶನಿವಾರದಂದು 138 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದು, ಒಟ್ಟು 17,62,114 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,80,916 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,950 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News