×
Ad

ಮಾ.20ರಂದು ‘ವಸಂತ ವಿಷುವ’ ವಿಶೇಷ ಖಗೋಳ ವಿದ್ಯಾಮಾನ

Update: 2022-03-19 20:55 IST

ಉಡುಪಿ : ಖಗೋಳ ವಿದ್ಯಮಾನಗಳು ಎಂದರೆ ಕೇವಲ ರಾತ್ರಿ ಆಕಾಶಕ್ಕೆ ಮಾತ್ರ ಸೀಮಿತವಾಗಿಲ್ಲ. ಕೆಲವೊಂದು ವಿದ್ಯಮಾನಗಳನ್ನು ಹಗಲಿನಲ್ಲೂ ನೋಡಬಹುದು. ಅಂತಹ ಒಂದು ವಿಶೇಷ ವಿದ್ಯಮಾನ ವಸಂತ ವಿಷುವ (ವಿಷುವತ್ ಸಂಕ್ರಾಂತಿ). ಪ್ರತಿ ವರ್ಷ ಭೂಮಿ-ಸೂರ್ಯನ ಬಂಧನದಿಂದ  ಸಂಭವಿಸುವ ಈ ವಿದ್ಯಮಾನವು ಈ ಬಾರಿ ಮಾ.20ರಂದು ಸಂಭವಿಸಲಿದೆ.

ವಿಷುವತ್ ಸಂಕ್ರಾಂತಿಯು ಒಂದು ವಿಶೇಷ ಖಗೋಳ ವಿದ್ಯಮಾನವಾಗಿದ್ದು, ಈ ದಿನ ಭೂಮಿಯ ಮೇಲೆ ಹಗಲು ಹಾಗೂ ರಾತ್ರಿಯ ಅವಧಿ ಸಮ ನಾಗಿರುತ್ತದೆ.  ವರ್ಷಕ್ಕೆ ಎರಡು ಬಾರಿ, ಮಾರ್ಚ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಈ ವಿದ್ಯಮಾನವು ಸಂಭವಿಸುತ್ತದೆ. ಸೂರ್ಯನು ನಿಖರವಾಗಿ ಪೂರ್ವ ದಿಕ್ಕಿನಲ್ಲಿ ಉದಯಿಸಿ, ಪಶ್ಚಿಮ ದಿಕ್ಕಿನಲ್ಲಿ ಅಸ್ತವಾಗುತ್ತಾನೆ ಮತ್ತು ಈ ದಿನ ಸೂರ್ಯನ ಬೆಳಕು ಭೂಮಿಯ ಸಮಭಾಜಕ ವೃತತಿದ ಮೇಲೆ  ನೇರವಾಗಿ ಬೀಳುತ್ತದೆ.

ಸೂರ್ಯನು ಉತ್ತರ ದಿಕ್ಕಿನಿಂದ ದಕ್ಷಿಣ ದಿಕ್ಕಿನೆಡೆಗೆ ಚಲಿಸಲು ಪ್ರಾರಂಭಿಸುವು ದರಿಂದ, ಉತ್ತರ ಗೋಳಾರ್ಧದಲ್ಲಿ ವಸಂತ ಋತು ಆರಂಭವಾಗುತ್ತದೆ. ಅಲ್ಲದೆ, ಈ ದಿನ, ಸೂರ್ಯನಕೇಂದ್ರ ಬಿಂದುವು ದಿಗಂತದ ಮೇಲೆ ೧೨ ಗಂಟೆಗಳ ಕಾಲ ಮತ್ತು ದಿಗಂತದ ಕೆಳಗೆ 12 ಗಂಟೆಗಳ ಕಾಲ ಇರುತ್ತದೆ. ಆದರೆ ವಿಷುವತ್ ಸಂಕ್ರಾತಿಯ ದಿನದಂದು ಸಮಭಾಜಕ ವೃತ್ತದಲ್ಲಿ, ಹಗಲು ಹಾಗೂ ರಾತ್ರಿಯ ಸಮಯವು ಸಮಾನವಾಗಿರುವುದಿಲ್ಲ. ಹಗಲಿನ ಅವಧಿಯು ರಾತ್ರಿಯ ಸಮಯ ಕ್ಕಿಂತ ಸ್ವಲ್ಪ ದೀರ್ಘವಾಗಿರುತ್ತದೆ.

ವಿಶ್ವಾದ್ಯಂತ ವಿಷುವತ್ ಸಂಕ್ರಾಂತಿಯನ್ನು ಮಾರ್ಚ್ ಈಕ್ವಿನಾಕ್ಸ್  ಎಂದು ಕರೆಯುತ್ತಾರೆ. ಭೂಗೋಳಾರ್ಧದ ಮೇಲ್ಭಾಗದವರು ಈ ದಿನವನ್ನು ವರ್ನಲ್ ಈಕ್ವಿನಾಕ್ಸ್ ಎಂದು ಕೂಡ ಕರೆಯುತ್ತಾರೆ ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News