ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಲಕ್ಷ್ಯ ಸೇನ್ ಫೈನಲ್‌ಗೆ

Update: 2022-03-19 15:49 GMT

ಲಂಡನ್, ಮಾ.19: ಭಾರತದ ಉದಯೋನ್ಮುಖ ಆಟಗಾರ ಲಕ್ಷ್ಯ ಸೇನ್ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಿದ್ದಾರೆ.

ಶನಿವಾರ ನಡೆದ ಪುರುಷರ ಸಿಂಗಲ್ಸ್‌ನ ಸೆಮಿ ಫೈನಲ್‌ನಲ್ಲಿ ಸೇನ್ ಅವರು ಎದುರಾಳಿ ಹಾಲಿ ಚಾಂಪಿಯನ್ ಮಲೇಶ್ಯದ ಲೀ ಝಿ ಜಿಯಾರನ್ನು 21-13, 12-21, 20-19 ಗೇಮ್‌ಗಳ ಅಂತರದಿಂದ ಮಣಿಸಿದರು.

20ರ ಹರೆಯದ ಸೇನ್ ಅವರು ಪ್ರಕಾಶ್ ಪಡುಕೋಣೆ ಹಾಗೂ ಪುಲ್ಲೇಲ ಗೋಪಿಚಂದ್ ಬಳಿಕ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪಿದ ಭಾರತದ ಮೂರನೇ ಪುರುಷರ ಸಿಂಗಲ್ಸ್ ಅಟಗಾರನೆಂಬ ಕೀರ್ತಿಗೆ ಭಾಜನರಾದರು.

 ಪಡುಕೋಣೆ ಹಾಗೂ ಗೋಪಿಚಂದ್ ಪ್ರತಿಷ್ಠಿತ ಟೂರ್ನಿಯಲ್ಲಿ ಜಯ ಸಾಧಿಸಿರುವ ಇಬ್ಬರು ಭಾರತೀಯರಾಗಿದ್ದಾರೆ. ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸೈನಾ ನೆಹ್ವಾಲ್ 2015ರಲ್ಲಿ ಫೈನಲ್ ತಲುಪಿದ್ದರು.

ಸೇನ್ ಕಳೆದ 6 ತಿಂಗಳಿನಿಂದ ಭರ್ಜರಿ ಫಾರ್ಮ್‌ನಲ್ಲಿದ್ದು ಜನವರಿಯಲ್ಲಿ ಇಂಡಿಯಾ ಓಪನ್ ಟೂರ್ನಿಯಲ್ಲಿ ಮೊದಲ ಬಾರಿ ಸೂಪರ್ 500 ಪ್ರಶಸ್ತಿಯನ್ನು ಜಯಿಸಿದ್ದರು. ಕಳೆದ ವಾರ ಜರ್ಮನ್ ಓಪನ್‌ನಲ್ಲಿ ರನ್ನರ್ಸ್ ಅಪ್ ಪ್ರಶಸ್ತ್ತಿಯನ್ನು ಜಯಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News