ತೊಕ್ಕೊಟ್ಟು : ಫರ್ನಿಚರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್
Update: 2022-03-19 23:21 IST
ಮಂಗಳೂರು : ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಮಸೀದಿ ಸಮೀಪದ ಕಟ್ಟಡದಲ್ಲಿರುವ ಶ್ರೀ ಬಾಬಾ ಫರ್ನಿಚರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಲಕ್ಷಾಂತರ ರೂ. ಮೌಲ್ಯದ ಪೀಠೋಪಕರಣಗಳು ಸುಟ್ಟು ಕರಕಲಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಅಗ್ನಿಶಾಮಕ ದಳ ಮತ್ತು ಉಳ್ಳಾಲ ಠಾಣೆಯ ಪೊಲೀಸರು ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.