×
Ad

ಚಾಮರಾಜನಗರ ಜಿಲ್ಲೆ; ಗಾಳಿ-ಮಳೆಯಿಂದ ಬೆಳೆ ಹಾನಿ

Update: 2022-03-20 08:35 IST

ಚಾಮರಾಜನಗರ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಶನಿವಾರ ಬಾರೀ ಗಾಳಿ, ಮಳೆಯಾಗಿದೆ.

ಚಾಮರಾಜನಗರ, ಗುಂಡ್ಲುಪೇಟೆ ತಾಲ್ಲೂಕುಗಳಲ್ಲಿ ಅಲ್ಲಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಬಾಳೆ, ಕಬ್ಬು ಹಾಗೂ ಬೀನ್ಸ್‌ ಬೆಳೆ ಹಾನಿಗೀಡಾಗಿದೆ.

ಚಾಮರಾಜನಗರ ತಾಲ್ಲೂಕಿನ ಕಿಲಗೆರೆ, ಕೊತ್ತಲವಾಡಿ, ಮಾದಲವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಕ್ಕಳಪುರ, ಕಬ್ಬಳ್ಳಿ, ಹೊಸ್ಪುರ ಗ್ರಾಮ, ಬೇಗೂರು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಮಳೆಯೊಂದಿಗೆ ಗಾಳಿಯೂ ರಭಸವಾಗಿ ಬೀಸಿದ್ದರಿಂದ ಚಾಮರಾಜನಗರ ತಾಲ್ಲೂಕಿನ ಕಿಲಗೆರೆ ಗ್ರಾಮದ ಪುಟ್ಟರಂಗಮ್ಮ ಎಂಬವರ ಮನೆ ಚಾವಣಿ ಹಾರಿ ಹೋಗಿದೆ. ಗ್ರಾಮದ ರೈತರಾದ ಕುಮಾರ್ ಹಾಗೂ ಮಾದಲಾಂಬಿಕೆ ಅವರಿಗೆ ಸೇರಿದ, ತಲಾ ಒಂದೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ನೆಲಕ್ಕಚ್ಚಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಹಕ್ಕಳಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ, ಕಟಾವಿಗೆ ಬಂದಿದ್ದ ಬಾಳೆ ಫಸಲು ಹಾನಿಗೀಡಾಗಿದೆ. ಹೊಸ್ಪುರ ಗ್ರಾಮದಲ್ಲಿ 10 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬಾಳೆ ನಷ್ಟವಾಗಿದೆ.

ಪರಿಹಾರಕ್ಕೆ ಒತ್ತಾಯ: ಮಳೆಯಿಂದಾಗಿ ಬೆಳೆ ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News