ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ
Update: 2022-03-20 13:28 IST
ಬೆಂಗಳೂರು, ಮಾ.20: ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿಂದು ನಡೆದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಸಹಕಾರ ಪ್ರಗತಿ ವಿಶೇಷ ಸಂಚಿಕೆ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ಗೃಹಸಚಿವ ಆರಗ ಜ್ಞಾನೇಂದ್ರ, ನೀರಾವರಿ ಖಾತೆ ಸಚಿವ ಗೋವಿಂದ ಎಂ.ಕಾರಜೋಳ ಇತರರು ಉಪಸ್ಥಿತರಿದ್ದರು.