×
Ad

ಕಬಕ ಶಾಲೆಯಿಂದ ಲ್ಯಾಪ್‍ಟಾಪ್ ಕಳವು ಪ್ರಕರಣ: ಆರೋಪಿ ಸೆರೆ

Update: 2022-03-20 18:47 IST

ಪುತ್ತೂರು: ಕಬಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಎರಡು ವರ್ಷದ ಹಿಂದೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿ, ಕಳವು ಮಾಡಿದ್ದ ಲ್ಯಾಪ್ ಟಾಪ್ ಅನ್ನು ವಶ ಪಡಿಸಿಕೊಂಡಿದ್ದಾರೆ. 

2020ರ ಫೆಬ್ರವರಿ 13 ರಂದು ಕಬಕ ಹಿರಿಯ ಪ್ರಾಥಮಿಕ ಶಾಲೆಯಿಂದ ಲ್ಯಾಪ್ ಟಾಪ್ ಕಳವು  ನಡೆದಿತ್ತು. ಈ ಕುರಿತು ಶಾಲಾ ಮುಖ್ಯ ಶಿಕ್ಷಕರು  ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು. ಈ ನಡುವೆ  2020 ನೇ ಮಾರ್ಚ್ 12 ರಂದು  ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಮಂಜನಾಡಿ ಗ್ರಾಮದ ಅಬ್ದುಲ್ ಫಯಾನ್ (22) ವಿಚಾರಣೆಯ ವೇಳೆ  ಕಬಕ ಶಾಲೆಯಿಂದ ಕಳವು ಮಾಡಿರುವುದನ್ನು ಬಾಯ್ಬಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News