×
Ad

ವಿನಾಯಕ ಬಾಳಿಗಾ ಕೊಲೆಗೆ 6 ವರ್ಷ; ಮಾ.21ರಂದು ಮೆರವಣಿಗೆ- ಸಾರ್ವಜನಿಕ ಸಭೆ

Update: 2022-03-20 21:41 IST

ಮಂಗಳೂರು, ಮಾ. 20: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ನಡೆದು ಆರು ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಮಾ. 21ರಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ವತಿಯಿಂದ ಮೆರವಣಿಗೆ- ಸಾರ್ವಜನಿಕ ಸಭೆಯನ್ನು ಆಯೋಜಿಸಲಾಗಿದೆ.

 ‘ಬಾಳಿಗಾ ನಡೆದ ದಾರಿಯಲ್ಲಿ ಹೆಜ್ಜೆ ಹಾಕೋಣ ಬನ್ನಿ’ ಎಂಬ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಬಾಳಿಗಾ ಮನೆಯವರೆಗೆ ಮೆರವಣಿಗೆಯನ್ನು ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News