×
Ad

ಬೆಂಗಳೂರು ವಿಮಾನ ನಿಲ್ದಾಣಕ್ಕೆ 'ಹುಸಿ ಬಾಂಬ್' ಕರೆ: ಅಧಿಕಾರಿಗಳಿಂದ ಸ್ಪಷ್ಟನೆ

Update: 2022-03-20 21:47 IST
ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಕರೆ ಬಂದಿರುವ ಹಿನ್ನೆಲೆಯಲ್ಲಿ ವಿಮಾಣ ನಿಲ್ದಾಣದ ಭದ್ರತಾ ಸಿಬ್ಬಂದಿ ತೀವ್ರ ತಪಾಸಣೆ ನಡೆಸಿದ ಬಳಿಕ ಇದೊಂದು 'ಹುಸಿ ಬಾಂಬ್' ಕರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.

ಸಂಜೆ ವೇಳೆ  ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ವಿಮಾಣ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಶ್ವಾನದಳ ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಪರಿಶೀಲನೆ ನಡೆಸಿತ್ತು.   

ಇದೀಗ  ತೀವ್ರ ತಪಾಸಣೆ ನಡೆಸಿದ ಬಳಿಕ 'ಹುಸಿ ಬಾಂಬ್' ಕರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News