ಉಕ್ರೇನ್‌ನಿಂದ ಬೆಂಗಳೂರು ತಲುಪಿದ ನವೀನ್ ಪಾರ್ಥಿವ ಶರೀರ
Update: 2022-03-21 07:16 IST
ಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಪಡೆಗಳು ನಡೆಸಿದ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡರ ಅವರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಅವರ ಮೃತದೇಹಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಗೌರವ ಪೂರ್ವಕ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಅರುಣ್ ಕುಮಾರ್, ಸಲೀಂ ಮುಹಮದ್ ಮತ್ತು ಇತರರು ಉಪಸ್ಥಿತರಿದ್ದರು.