ಪುಂಜಾಲಕಟ್ಟೆ: ಕಾನೂನು ಮಾಹಿತಿ ಶಿಬಿರ
Update: 2022-03-21 11:01 IST
ಪುಂಜಾಲಕಟ್ಟೆ,ಮಾ.20: ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ಪುಂಜಾಲಕಟ್ಟೆ ಇದರ ವತಿಯಿಂದ ಕಾನೂನು ಮಾಹಿತಿ ಶಿಬಿರ ರೌಲತುಲ್ ಉಲೂಮ್ ಮದರಸ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕರ್ನಾಟಕ ಹೈ ಕೋರ್ಟ್ ವಕೀಲರಾದ ಅಶ್ರಫ್ ಅಗ್ನಾಡಿ ಕಾನೂನು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸ್ಜಿದ್ ಸದರ್ ಉಸ್ತಾದ್ ಬಹು ಅಬ್ದುಲ್ ರಹ್ಮಾನ್ ಅರ್ಶದಿ ದುವಾ ನೆರವೇರಿಸಿದರು. ವೇದಿಕೆಯಲ್ಲಿ ಬದ್ರಿಯಾ ಜುಮಾ ಮಸ್ಜಿದ್ ಅಧ್ಯಕ್ಷ ಯೂಸುಫ್ ಹಾಜಿ, ನುಸ್ರತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಫೈರೋಜ್ ಉಪಸ್ಥಿತರಿದ್ದರು.