ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಲು ಬೃಂದಾ ಕಾರಟ್ ಆಗ್ರಹ

Update: 2022-03-21 07:16 GMT

ಮಂಗಳೂರು, ಮಾ.20: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳಿಗಳ ಪತ್ತೆಗಾಗಿ ತನಿಖೆಗೆ ಎಸ್ಐಟಿ ರಚಿಸುವಂತೆ ಸಿಪಿಎಂ ನಾಯಕಿ, ಮಾಜಿ ಸಂಸದೆ ಬೃಂದಾ ಕಾರಟ್ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಸಿಪಿಎಂ ಹಮ್ಮಿಕೊಂಡಿದ್ದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ವಿನಾಯಕ ಬಾಳಿಗಾರ ಮನೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು ಈ ವೇಳೆ ಮಾತನಾಡಿದರು.

ವಿನಾಯಕ ಬಾಳಿಗಾ ಹತ್ಯೆಯಾಗಿ ಆರು ವರ್ಷಗಳೇ ಕಳೆದರೂ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರೆತಿಲ್ಲ. ಪೊಲೀಸರು ಈ ಪ್ರಕರಣದ ತನಿಖೆಯನ್ನು ಸಮರ್ಪಕವಾಗಿ ನಡೆಸುತ್ತಿಲ್ಲ. ಆರೋಪಿಗಳು ಆಡಳಿತ ಪಕ್ಷದ ಬೆಂಬಲದಿಂದ ರಕ್ಷಣೆ ಪಡೆಯುತ್ತಿದ್ದಾರೆ. ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳಿಗಳ ಪತ್ತೆಗಾಗಿ ಪ್ರಕರಣದ ಸಮಗ್ರ ತನಿಖೆಗೆ ಎಸ್ಐಟಿ ರಚಿಸಬೇಕಾದ ಅಗತ್ಯವಿದೆ ಎಂದು ಬೃಂದಾ ಕಾರಟ್ ಹೇಳಿದ್ದಾರೆ.

 ಬಾಳಿಗಾ ಸೋದರಿಯರಿಗೆ ಧೈರ್ಯ ತುಂಬಿದ ಬೃಂದಾ ಕಾರಟ್, ನ್ಯಾಯದ ಹೋರಾಟದಲ್ಲಿ ಕುಟುಂಬದೊಂದಿಗೆ ಸಿಪಿಎಂ ಇರಲಿದೆ ಎಂದು ಭರವಸೆ ನೀಡಿದರು.

ಈ ವೇಳೆ ಹಿರಿಯ ವಿಚಾರವಾದಿ ಪ್ರೊ.ನರೇಂದ್ರ ನಾಯಕ್, ಸಿಪಿಎಂ ರಾಜ್ಯ ಮುಖಂಡರಾದ ಕೆ.ನೀಲಾ, ಕೆ.ಪ್ರಕಾಶ್, ಗುರುಶಾಂತ್, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ನ್ಯಾಯವಾದಿ ಆಶಾ ನಾಯಕ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಎಂ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಡಾ.ಕೃಷ್ಣಪ್ಪ ಕೊಂಚಾಡಿ ಉಪಸ್ಥಿತರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News