×
Ad

ದಾವಣಗೆರೆ: ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ಹಸ್ತಾಂತರ

Update: 2022-03-21 18:51 IST

ದಾವಣಗೆರೆ : ಉಕ್ರೇನ್ ನಲ್ಲಿ ಶೆಲ್ ದಾಳಿಗೆ ಬಲಿಯಾಗಿದ್ದ ನವೀನ್ ಮೃತದೇಹವನ್ನು ದಾವಣಗೆರೆಯ ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಲಾಗಿದೆ.

ಪೊಲೀಸ್ ಭದ್ರತೆಯೊಂದಿಗೆ ದಾವಣಗೆರೆ ಮೆಡಿಕಲ್ ಕಾಲೇಜಿಗೆ ಬಂದ ನವೀನ್ ಪಾರ್ಥಿವ ಶರೀರಕ್ಕೆ ಹಾರ ಹಾಕಿ ಎಸ್ ಎಸ್ ಮೆಡಿಕಲ್ ಕಾಲೇಜ್ ಸಿಬ್ಬಂದಿ ಗೌರವಿಸಿದ್ದಾರೆ.

ನವೀನ್ ಪಾರ್ಥಿವ ಶರೀರದ ಜೊತೆಗೆ ನವೀನ್ ತಂದೆ ಶೇಖರ್ ಗೌಡ, ತಾಯಿ, ಸಹೋದರ ಕೂಡ ಆಸ್ಪತ್ರೆಗೆ ಆಗಮಿಸಿದ್ದರು. ಎಸ್‍ಎಸ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ.ಎಸ್ ಪ್ರಸಾದ ನೇತೃತ್ವದ ವೈದ್ಯರ ತಂಡ  ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News