ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆ: ಅವಧಿ ವಿಸ್ತರಣೆ
Update: 2022-03-21 20:07 IST
ಉಡುಪಿ : ಭಾರತೀಯ ಚುನಾವಣಾ ಆಯೋಗವು ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ‘ನನ್ನ ಮತ ನನ್ನ ಭವಿಷ್ಯ ಒಂದು ಮತದ ಶಕ್ತಿ’ ವಿಷಯದ ಕುರಿತು ರಸಪ್ರಶ್ನೆ, ವೀಡಿಯೋ ತಯಾರಿಕೆ, ಗಾಯನ, ಭಿತ್ತಿಚಿತ್ರ ವಿನ್ಯಾಸ ಹಾಗೂ ಘೋಷ ವಾಕ್ಯ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯ ನಮೂದುಗಳನ್ನು - voter-contest@eci.gov.in-ನಲ್ಲಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.