ದಿಲ್ಲಿ ಹಿಂಸಾಚಾರ ಪ್ರಕರಣ: ಮತ್ತೊಮ್ಮೆ ಉಮರ್‌ ಖಾಲಿದ್‌ ಜಾಮೀನು ಅರ್ಜಿಯ ತೀರ್ಪನ್ನು ಮುಂದೂಡಿದ ನ್ಯಾಯಾಲಯ

Update: 2022-03-21 14:54 GMT
Photo: Twitter/kaushikrj6

ಹೊಸದಿಲ್ಲಿ: ಫೆಬ್ರವರಿ 2020 ರಲ್ಲಿ ದಿಲ್ಲಿಯಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ, ಹೋರಾಟಗಾರ ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ದಿಲ್ಲಿ ನ್ಯಾಯಾಲಯವು ಸೋಮವಾರ ಮುಂದೂಡಿದೆ ಎಂದು ಪಿಟಿಐ ವರದಿ ಮಾಡಿದೆ.

ಸೋಮವಾರ ಆದೇಶ ನೀಡಬೇಕಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ಈ ಕುರಿತಾದ ಆದೇಶ ಇನ್ನೂ ಸಿದ್ಧವಾಗಿಲ್ಲ. ಹಾಗಾಗಿ ತೀರ್ಪನ್ನು ಮಾರ್ಚ್ 23 ರಂದು ಸಂಜೆ 4 ಗಂಟೆಗೆ ಕಾಯ್ದಿರಿಸಲಾಗಿದೆ ಎಂದು ಹೇಳಿದ್ದಾರೆ.

ಖಾಲಿದ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಮುಂದೂಡುವುದು ಇದು ಎರಡನೇ ಬಾರಿಯಾಗಿದ್ದು, ಮಾರ್ಚ್ 3 ರಂದು ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಜಾಮೀನು ಆದೇಶವನ್ನು ಮಾರ್ಚ್ 14 ರಂದು ಅಂಗೀಕರಿಸಬೇಕಾಗಿತ್ತು, ಆದರೆ ಈ ಪ್ರಕರಣದಲ್ಲಿ ವಕೀಲರು ತಮ್ಮ ಲಿಖಿತ ಸಲ್ಲಿಕೆಗಳನ್ನು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿ ಆದೇಶವನ್ನು ಮಾರ್ಚ್ 21 ಕ್ಕೆ ಮುಂದೂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News