ಎರಡನೇ ಅವಧಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಆಯ್ಕೆ
Update: 2022-03-21 21:28 IST
ಪಣಜಿ: ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಮುಂದವರಿಯಲಿದ್ದಾರೆ ಎಂದು ವರದಿ ಆಗಿದೆ. ಆ ಮೂಲಕ ಹಿರಿಯ ಶಾಸಕ ವಿಶ್ವಾಜಿ ರಾಣೆ ಅವರು ಸಿಎಂ ಆಗಲಿದ್ದಾರೆ ಎಂಬ ಊಹಾಪೋಹಕ್ಕೆ ತೆರೆಬಿದ್ದಿದೆ.
ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ ಮತ್ತು ಮೂವರು ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ಬಿಜೆಪಿಯು ಸರ್ಕಾರ ರಚಿಸಲು ಸಿದ್ಧವಾಗಿದೆ ಎಂದು Indianexpress.com ವರದಿ ಮಾಡಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಣಜಿಯಲ್ಲಿರುವ ಪಕ್ಷದ ರಾಜ್ಯ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸಾವಂತ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ.