×
Ad

ಉಡುಪಿ: 12 ರಿಂದ 15 ರ್ಷದ 2702 ಮಂದಿಗೆ ಲಸಿಕೆ

Update: 2022-03-21 22:17 IST

ಉಡುಪಿ : ಜಿಲ್ಲೆಯಲ್ಲಿ ಇಂದು 12ರಿಂದ 14ವರ್ಷದೊಳಗಿನ ಒಟ್ಟು 2702 ಮಕ್ಕಳಿಗೆ ಕೋವಿಡ್ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದೆ. ಈ ಮೂಲಕ ಈವರೆಗೆ ಒಟ್ಟು ೧೧,೧೫೩ ಮಂದಿ ಮಕ್ಕಳು ಈ ಲಸಿಕೆಯನ್ನು ಪಡೆದಂತಾಗಿದೆ.

ಅಲ್ಲದೇ ದಿನದಲ್ಲಿ ಒಟ್ಟು ೪೬೪೬ ಮಂದಿ ಸೋಮವಾರ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ೬೦ ವರ್ಷ ಮೇಲಿನ ೫೮೭ ಮಂದಿ ಹಿರಿಯ ನಾಗರಿಕರು ಸೇರಿದಂತೆ ಒಟ್ಟು ೬೧೩ ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆ ಪಡೆದರೆ, ೨೭೪೬ ಮಂದಿ ಮೊದಲ ಡೋಸ್ ಹಾಗೂ ೧೨೮೭ ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಶೂನ್ಯ ಪಾಸಿಟಿವ್: ಜಿಲ್ಲೆಯಲ್ಲಿ ಇಂದು ಸಹ ಯಾರಲ್ಲೂ ಕೋವಿಡ್-೧೯  ಸೋಂಕು ಪತ್ತೆಯಾಗಿಲ್ಲ. ದಿನದಲ್ಲಿ ಒಟ್ಟು ೨೬೬ ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಉಡುಪಿ ತಾಲೂಕಿನಲ್ಲಿ ೨೦೯, ಕುಂದಾಪುರ ೩೫ ಹಾಗೂ ಕಾರ್ಕಳ ತಾಲೂಕಿನಲ್ಲಿ ೨೨ ಮಂದಿ ಪರೀಕ್ಷೆಗೊಳಗಾಗಿದ್ದರು.

ದಿನದಲ್ಲಿ ಯಾರೂ ಸೋಂಕಿನಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ ಸದ್ಯ ಚಿಕಿತ್ಸೆ ಯಲ್ಲಿರುವವರ ಸಂಖ್ಯೆ ೫ ಆಗಿದೆ. ಜ.೧ರ ನಂತರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ ೧೮,೪೨೭ ಆದರೆ, ಚೇತರಿಸಿಕೊಂಡವರ ಸಂಖ್ಯೆ ೧೮೪೮೯ ಆಗಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News