ರಾಜ್ಯದಲ್ಲಿ ಕೊರೋನ ಮತ್ತಷ್ಟು ಇಳಿಕೆ: ಸೋಮವಾರ 71 ಮಂದಿಗೆ ಕೋವಿಡ್ ದೃಢ, ಇಬ್ಬರು ಮೃತ್ಯು

Update: 2022-03-21 16:50 GMT

ಬೆಂಗಳೂರು, ಮಾ.21: ರಾಜ್ಯದಲ್ಲಿ ಸೋಮವಾರ 71 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 143 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3944785ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,039ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,891ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರ ಸಾವು: ಬೆಂಗಳೂರು ನಗರ 1, ಹಾಸನ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 71 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ  ಬಳ್ಳಾರಿ 1, ಬೆಂಗಳೂರು ನಗರ 53, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 1, ಚಿತ್ರದುರ್ಗ 5, ದಕ್ಷಿಣ ಕನ್ನಡ 1, ಧಾರವಾಡ 1, ರಾಮನಗರ 2, ಶಿವಮೊಗ್ಗ 2, ತುಮಕೂರು  ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 91 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಸೋಮವಾರದಂದು 53 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಓರ್ವ ಮೃತಪಟ್ಟಿದ್ದು, ಒಟ್ಟು  17,62,459 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,81,060 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,952 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News