ಲಾಲೂ ಪ್ರಸಾದ್‌ ಯಾದವ್‌ ಆರೋಗ್ಯ ಸ್ಥಿತಿ ಗಂಭೀರ: ದಿಲ್ಲಿ ಏಮ್ಸ್‌ಗೆ ರವಾನಿಸಲು ಸಿದ್ಧತೆ

Update: 2022-03-22 13:01 GMT

ಹೊಸದಿಲ್ಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಂಗಳವಾರ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ನಿಂದ ದಿಲ್ಲಿಯ ಏಮ್ಸ್‌ಗೆ ಕರೆದೊಯ್ಯಲಾಗುತ್ತಿದೆ.

"ಲಾಲೂ ಪ್ರಸಾದ್‌ರಿಗೆ ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆ ಇರುವುದು ಕಂಡುಬಂದಿದೆ. ಉತ್ತಮ ಚಿಕಿತ್ಸೆಗಾಗಿ ದಿಲ್ಲಿಯ ಏಮ್ಸ್‌ಗೆ ಕಳುಹಿಸಲಾಗುತ್ತಿದೆ" ಎಂದು RIMS ನಿರ್ದೇಶಕ ಡಾ. ಕಾಮೇಶ್ವರ ಪ್ರಸಾದ್ ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಲಾಲು ಪ್ರಸಾದ್ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಶುಕ್ರವಾರ ಅವರಿಗೆ ನ್ಯುಮೋನಿಯಾ ಕಾಣಿಸಿಕೊಂಡಿತ್ತು. ಅವರ ಉತ್ತಮ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ನಾವು ಅವರನ್ನು ಏಮ್ಸ್ ದಿಲ್ಲಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ರಿಮ್ಸ್ ನಿರ್ದೇಶಕ ಡಾ.ಕಾಮೇಶ್ವರ್ ಪ್ರಸಾದ್ ಅವರು ತಿಳಿಸಿದ್ದಾರೆ.

ಫೆಬ್ರವರಿ 21 ರಂದು, ಮೇವು ಹಗರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಲಾಲೂ ಪ್ರಸಾದ್ ಯಾದವ್‌ ಅವರಿಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News