ಮುಂದಿನ ವರ್ಷದಿಂದ ಪುನೀತ್, ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕ: ಅಶ್ವಿನಿ ಪುನೀತ್
Update: 2022-03-22 20:38 IST
ಮೈಸೂರು,ಮಾ.22: ಮುಂದಿನ ವರ್ಷದಿಂದ ಪಾರ್ವತಮ್ಮ ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕ ನೀಡುವುದಾಗಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ತಿಳಿಸಿದ್ದಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ನಿರೂಪಣೆ ಮಾಡುತ್ತಿದ್ದ ಪ್ರೊ.ಸಿ.ನಾಗಣ್ಣ ತಿಳಿಸಿದರು.
ಮುಂದಿನ ವರ್ಷದಿಂದ ಪಾರ್ವತಮ್ಮ ರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ತಿಳಿಸಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದರು.
ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಬುಸಿನೆಸ್ ಮ್ಯಾನೇಜ್ ಮೆಂಟ್ (ಎಂಬಿಎ) ವಿಷಯದಲ್ಲಿ ಹಾಗೂ ಲಲಿತಕಲಾ ವಿಷಯದಲ್ಲಿ ಡಾ.ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಚಿನ್ನದ ಪದಕ ನೀಡಲಾಗುತ್ತದೆ ಎಂದು ತಿಳಿಸಿದರು.