×
Ad

ಗ್ರಂಥಾಲಯ ಮೇಲ್ವಿಚಾರಕರ ನೇಮಕಕ್ಕೆ ಅರ್ಜಿ ಆಹ್ವಾನ

Update: 2022-03-22 20:55 IST

ಉಡುಪಿ : ಬೈಂದೂರು ತಾಲೂಕು ಶಿರೂರು ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಸಾಮಾನ್ಯ ಮೀಸಲಾತಿಯಡಿ ಅರ್ಹ ಗ್ರಾಮೀಣ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಎಸೆಸೆಲ್ಸಿ ಉತ್ತೀರ್ಣರಾಗಿರುವ ಹಾಗೂ ಗ್ರಾಪಂ ವ್ಯಾಪಿಯಲ್ಲಿ ವಾಸವಿರುವ ಅಭ್ಯರ್ಥಿಗಳು ಎ.೨೦ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಶಿರೂರು ಗ್ರಾಪಂ ದೂರವಾಣಿ ಸಂಖ್ಯೆ: ೦೮೨೫೪-೨೫೩೦೫೩ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ, ಉಡುಪಿ ದೂರವಾಣಿ ಸಂಖ್ಯೆ: ೦೮೨೦-೨೫೨೩೪೩೮ ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News