ರಾಜ್ಯದಲ್ಲಿ 92 ಮಂದಿಗೆ ಕೊರೋನ ದೃಢ: ಇಬ್ಬರು ಮೃತ್ಯು

Update: 2022-03-22 17:08 GMT

ಬೆಂಗಳೂರು, ಮಾ.22: ರಾಜ್ಯದಲ್ಲಿ ಮಂಗಳವಾರ 92 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದು, 143 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3944877ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,041ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,838ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರ ಸಾವು: ಬೆಂಗಳೂರು ನಗರ 1, ಹಾವೇರಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 92 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬಳ್ಳಾರಿ 2, ಬೆಂಗಳೂರು ನಗರ 81, ದಕ್ಷಿಣ ಕನ್ನಡ 1, ಧಾರವಾಡ 2, ಕಲಬುರಗಿ 1, ಕೋಲಾರ 1, ಶಿವಮೊಗ್ಗ 2, ಉಡುಪಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 81 ಜನರಿಗೆ ಕೊರೋನ ದೃಢ

ಬೆಂಗಳೂರು, ಮಾ.22: ರಾಜಧಾನಿಯಲ್ಲಿ ಮಂಗಳವಾರದಂದು 81 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. ಓರ್ವ ಮೃತಪಟ್ಟಿದ್ದು, ಒಟ್ಟು 17,62,556 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,81,141 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,953 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News