ಬೆಂಗಳೂರು: ಎಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ; ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ನಿಷೇಧಾಜ್ಞೆ ಜಾರಿ

Update: 2022-03-22 17:27 GMT

ಬೆಂಗಳೂರು, ಮಾ.22: ಎಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ ಮಾ.28ರಿಂದ ಎ.11ರವರೆಗೂ ಶಾಲಾ ಕೇಂದ್ರಗಳ ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಯಾರಾದರೂ ಪರೀಕ್ಷಾ ಕೇಂದ್ರಗಳ 200 ಮೀ.ವ್ಯಾಪ್ತಿಯೊಳಗೆ ಪ್ರವೇಶಿಸಿದರೆ, ಪ್ರವೇಶಿಸಲು ಯತ್ನಿಸಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ನಿಷೇಧಾಜ್ಞೆ ಜಾರಿಗೊಳಿಸಿದ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್, ಸೈಬರ್ ಅಂಗಡಿಗಳನ್ನು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳೊಳಗೆ ಪ್ರವೇಶಿಸುವುದು, ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನರು ಸೇರುವುದು, ಅಲ್ಲದೇ ಮೊಬೈಲ್ ಬಳಕೆಯನ್ನು ನಿಷೇಧಿಸಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News