ತೃತೀಯ ಲಿಂಗಿಗಳ ಅಭಿವೃದ್ಧಿಗೆ ಪ್ರತ್ಯೇಕ ಸಮಿತಿ: ಸಚಿವ ಆಚಾರ್ ಹಾಲಪ್ಪ
Update: 2022-03-22 23:50 IST
ಬೆಂಗಳೂರು, ಮಾ.22: ರಾಜ್ಯದಲ್ಲಿ ತೃತೀಯ ಲಿಂಗಿಗಳ ಶ್ರೇಯೋಭಿವೃದ್ಧಿಗಾಗಿ ಪ್ರತ್ಯೇಕ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವ ಆಚಾರ್ ಹಾಲಪ್ಪ ತಿಳಿಸಿದರು.
ಮಂಗಳವಾರ ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಲಿಂಗತ್ವ ಅಲ್ಪಸಂಖ್ಯಾತರ ಪ್ರತ್ಯೇಕ ಸಮೀಕ್ಷೆಗಾಗಿ ನಿರ್ಧರಿಸಲಾಗಿದೆ. ಸಮೀಕ್ಷೆಗಾಗಿ ಅವರನ್ನೇ ಬಳಸಿಕೊಳ್ಳಲಾಗುತ್ತದೆ ಎಂದರು.
ಸದಸ್ಯರ ಒತ್ತಾಯದ ಮೇರೆಗೆ ಸಮಿತಿ ರಚಿಸಲು ಸರಕಾರ ಸಿದ್ಧವಿದೆ ಎಂದು ಭರವಸೆ ನೀಡಿದರಲ್ಲದೆ, ಸರಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಶೇ.1ರಷ್ಟು ಮೀಸಲಾತಿ ನೀಡಬೇಕು ಎಂಬ ನಿಯಮವಿದೆ. ಆದರೆ ಅದು ಸರಿಯಾಗಿ ಜಾರಿಯಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.