×
Ad

ಹೈದರಾಬಾದ್: ಗೋಡೌನ್‌ನಲ್ಲಿ ಅಗ್ನಿ ಆಕಸ್ಮಿಕ; 11 ಕಾರ್ಮಿಕರು ಸಜೀವ ದಹನ

Update: 2022-03-23 10:12 IST

ಹೈದರಾಬಾದ್‌: ತೆಲಂಗಾಣ ರಾಜ್ಯದ ಸಿಕಂದರಬಾದ್ ನ  ಭೋಯಿಗುಡಾ ಪ್ರದೇಶದಲ್ಲಿ ಟಿಂಬರ್  ಗೋಡೌನ್‌ಗೆ ಬುಧವಾರ ಬೆಳಗ್ಗಿನ ಜಾವ ಬೆಂಕಿ ಹೊತ್ತಿಕೊಂಡಿದ್ದರಿಂದ 11 ಕಾರ್ಮಿಕರು ಸಜೀವ ದಹನವಾಗಿದ್ದಾರೆ ಎಂದು India Today ವರದಿ ಮಾಡಿದೆ.

ಬೆಂಕಿಯನ್ನು ಹತೋಟಿಗೆ ತರಲು ಆರು ಅಗ್ನಿಶಾಮಕ ವಾಹನಗಳ ಧಾವಿಸಿದ್ದು ಘಟನೆಯ ಬಗ್ಗೆ ಮುಖ್ಯಮಂತ್ರಿ ಕೆ.  ಚಂದ್ರಶೇಖರ ರಾವ್ ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೃತಪಟ್ಟವರೆಲ್ಲರೂ ಬಿಹಾರದಿಂದ ಬಂದ ವಲಸೆ ಕಾರ್ಮಿಕರಾಗಿದ್ದು ಹೈದರಾಬಾದ್‌ನ ಟಿಂಬರ್ ಗೋಡೌನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬೆಂಕಿ ಹೊತ್ತಿಕೊಂಡಾಗ 12 ಕಾರ್ಮಿಕರ ಪೈಕಿ ಓರ್ವ ಅಪಾಯದಿಂದ ಪಾರಾಗಿದ್ದಾನೆ.

 ಬುಧವಾರ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ.

ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ಕೇಂದ್ರ ವಲಯದ ಪ್ರಕಾರ, ಎಲ್ಲಾ ಹನ್ನೊಂದು ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಶವಗಳನ್ನು  ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News