×
Ad

ಉತ್ತರಪ್ರದೇಶ:ನಿರ್ಮಾಣ ಹಂತದ ಗೋಡೆ ಕುಸಿದು ಮೂವರು ಕಾರ್ಮಿಕರು ಮೃತ್ಯು

Update: 2022-03-23 10:19 IST

ಲಕ್ನೊ: ಉತ್ತರ ಪ್ರದೇಶದ ಗಾಝಿಯಾಬಾದ್‌ನಲ್ಲಿ ಬುಧವಾರ ನಿರ್ಮಾಣ ಹಂತದ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಹೂತುಹೋಗಿದ್ದ ಇನ್ನಿಬ್ಬರು ಘಟನೆಯಲ್ಲಿ ಬದುಕುಳಿದಿದ್ದಾರೆ ಎಂದು India Today ವರದಿ ಮಾಡಿದೆ.  

ವಿಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಗಾಝಿಯಾಬಾದ್‌ನ ಡಿಎವಿ ಚೌಕ್ ಬಳಿ ರಾತ್ರಿ ಈ ಘಟನೆ ನಡೆದಿದೆ. ರಾತ್ರಿಯಿಡೀ ಈ ಪ್ರದೇಶದಲ್ಲಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು.

ಗೋಡೆ ಕುಸಿದ ನಂತರ ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಮೂವರು ಮೃತದೇಹಗಳು ಮತ್ತು ಇಬ್ಬರು ಬದುಕುಳಿದವರನ್ನು ರಕ್ಷಣಾ ತಂಡವು ಅವಶೇಷಗಳಡಿಯಿಂದ ಹೊರತೆಗೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News