ಸುಳ್ಯ : ರಸ್ತೆ ಅಪಘಾತಕ್ಕೆ ಓರ್ವ ವಿದ್ಯಾರ್ಥಿ ಬಲಿ, ಮತ್ತೋರ್ವನಿಗೆ ಗಂಭೀರ ಗಾಯ
Update: 2022-03-23 16:42 IST
ಸುಳ್ಯ: ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಿಯಂತ್ರಣ ತಪ್ಪಿದ ಬೈಕ್ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಪೆರಾಜೆಯ ಆರ್.ಡಿ. ವೆಂಕಪ್ಪ ಎಂಬವರ ಪುತ್ರ ದರ್ಶನ್ ಮತ್ತು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದರು.
ಕುಂಬಳಚೇರಿ ಬಳಿಯ ಗಡಿ ಗುಡ್ಡೆ ಎಂಬಲ್ಲಿ ನಿಯಂತ್ರಣ ತಪ್ಪಿದ ಬ್ರೇಕ್ ಮಗುಚಿ ಬಿದ್ದು ವಿಶ್ವದೀಪ್ ಸ್ಥಳದಲ್ಲೇ ಮೃತಪಟ್ಟರೆ, ದರ್ಶನ್ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ದರ್ಶನ್ ಬೈಕ್ ಚಲಾಯಿಸುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.