ಸೀಡಿ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಪ್ರಶ್ನಿಸಿ ಅರ್ಜಿ: ಪರಿಶೀಲಿಸುವುದಾಗಿ ಹೈಕೋರ್ಟ್ ಹೇಳಿಕೆ
Update: 2022-03-23 18:38 IST
ಬೆಂಗಳೂರು, ಮಾ.23: ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗಾಗಿಯೇ ಹೈಕೋರ್ಟ್‍ನಲ್ಲಿ ವಿಶೇಷ ಪೀಠವನ್ನು ರಚಿಸಿರುವಾಗ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಯಾಗಿರುವ ಸೀಡಿ ಪ್ರಕರಣದ ವಿಚಾರಣೆ ತಮ್ಮ ವ್ಯಾಪ್ತಿಗೆ ಬರಲಿದೆಯೇ ಎಂಬ ಬಗ್ಗೆ ಪರಿಶೀಲಿಸುವುದಾಗಿ ನ್ಯಾ.ನಾಗಪ್ರಸನ್ನ ತಿಳಿಸಿದ್ದಾರೆ.
ಸೀಡಿ ಪ್ರಕರಣದ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ ಸಿಂಧುತ್ವ ಪ್ರಶ್ನಿಸಿ ಹಾಗೂ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್ ಮೇಲ್ ಪ್ರಕರಣದ ಎಫ್‍ಐಆರ್ ರದ್ದು ಕೋರಿ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳು ವಿಚಾರಣೆಗೆ ನಿಗದಿಯಾಗಿದ್ದು, ಈ ಅರ್ಜಿಗಳನ್ನು ಪರಿಶೀಲಿಸಿ ಶುಕ್ರವಾರ ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿಗಳು ಹೇಳಿದರು. ವಿಚಾರಣೆಯನ್ನು ಮುಂದೂಡಿತು.