×
Ad

ಭೋವಿ ಅಭಿವೃದ್ಧಿ ನಿಗಮ ನಿರ್ದೇಶಕಿಗೆ ಬಿಬಿಎಂಪಿ ಅಧಿಕಾರಿಯಿಂದ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು

Update: 2022-03-23 21:38 IST

ಬೆಂಗಳೂರು, ಮಾ.23: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಭೋವಿ ನಿಗಮದ ನಿರ್ದೇಶಕಿ ನೀಡಿದ ದೂರಿನ ಮೇರೆಗೆ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಗಿರೀಶ್ ಎಂಬುವರ ವಿರುದ್ಧ ಮೊಕದ್ದಮೆ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿ ಗಿರೀಶ್ ವ್ಯವಸ್ಥಾಪಕ ನಿರ್ದೇಶಕರ ಪ್ರಭಾರ ಸ್ಥಾನ ಕೊಡಬೇಕು ಎಂದು ನಿರ್ದೇಶಕಿ ಕಚೇರಿಗೆ ಅತಿಕ್ರಮವಾಗಿ ಪ್ರವೇಶಿಸಿ ಅನುಚಿತ ವರ್ತನೆ ತೋರಿದ್ದಾರೆ. ಜತೆಗೆ, ಅವಾಚ್ಯ ಶಬ್ಧಗಳಿಂದ ನಿಂದಿಸಿ ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News