×
Ad

ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ; ವಿಡಿಯೋ ವೈರಲ್

Update: 2022-03-24 10:30 IST

ವಿಜಯಪುರ: ಅಶ್ಲೀಲವಾಗಿ ಬೈದಿದ್ದಾನೆ ಎಂದು ಆರೋಪಿಸಿ 12 ವರ್ಷದ ಬಾಲಕನೊಬ್ಬನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತ ವಿಡಿಯೋ ಒಂದು  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾ.18ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಸಮೀಪದ ವಡವಡಗಿ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. 

ಸದ್ಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News