×
Ad

ಉಕ್ರೇನ್​​​ ನಲ್ಲಿ ಮೃತಪಟ್ಟ ನವೀನ್​​​ ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

Update: 2022-03-24 16:48 IST

ಹಾವೇರಿ, ಮಾ. 24: ಉಕ್ರೇನ್​​​ ಮಿಸೈಲ್​​ ದಾಳಿ ವೇಳೆ ಮೃತಪಟ್ಟ ಕರ್ನಾಟಕದ ಹಾವೇರಿ ಜಿಲ್ಲೆಯ ಚಳಗೇರಿಯಲ್ಲಿರುವ ನವೀನ್​​​ ನಿವಾಸಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಭೇಟಿ ನೀಡಿದರು.

ನವೀನ್ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರೊಂದಿಗೆ ಕೆಲವು ನಿಮಿಷಗಳ ಕಾಲ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಧಿಕಾರಿ, ಹಾವೇರಿ ಜಿಲ್ಲಾಧಿಕಾರಿ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News