×
Ad

ನಾಲ್ಕು ದಿನಗಳಲ್ಲಿ ಮೂರನೇ ಬಾರಿಗೆ ಏರಿಕೆಯಾದ ಪೆಟ್ರೋಲ್‌, ಡೀಸೆಲ್‌ ದರ

Update: 2022-03-25 08:26 IST
ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿಗೆ ಏರಿಕೆಯಾಗಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಶುಕ್ರವಾರ 80 ಪೈಸೆಯಷ್ಟು ಏರಿಕೆಯಾಗಿದೆ. ನಾಲ್ಕು ದಿನಗಳಲ್ಲಿ ತೈಲ ದರ ಪ್ರತಿ ಲೀಟರ್‌ಗೆ ಒಟ್ಟು ರೂ. 2.40ರಷ್ಟು ಹೆಚ್ಚಳವಾಗಿದೆ.

ಮಂಗಳವಾರ, ಬುಧವಾರ ಪೆಟ್ರೋಲ್‌, ಡೀಸೆಲ್‌ ದರ ಏರಿಸಲಾಗಿತ್ತು. ಈಗ ಮತ್ತೆ ಶುಕ್ರವಾರ 80 ಪೈಸೆಯಷ್ಟು ಏರಿಕೆಯಾಗಿದೆ. ಸುಮಾರು ನಾಲ್ಕೂವರೆ ತಿಂಗಳ ಅಂತರದ ಬಳಿಕ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಏರಿಕೆಯಾಗುತ್ತಿದೆ. 

ದಿಲ್ಲಿಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ ರೂ. 97.81 ಮತ್ತು ಡೀಸೆಲ್‌ ದರ ರೂ. 89.07 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮವಾಗಿ ಲೀಟರ್‌ಗೆ 85 ಮತ್ತು 79 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್‌ ದರ ಲೀಟರಿಗೆ ರೂ. 103.11 ಮತ್ತು ಡೀಸೆಲ್ ದರ ಲೀಟರಿಗೆ ರೂ.87.37 ಆಗಿದೆ.

ಮಾ.23ರಂದು ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ ದರ 50 ರೂ. ಏರಿಕೆಯಾಗಿತ್ತು. ದಿಲ್ಲಿಯಲ್ಲಿ ಗುರುವಾರ ಸಿಎನ್‌ಜಿ ದರ ಪ್ರತಿ ಕೆಜಿಗೆ ಒಂದು ರೂ. ಹೆಚ್ಚಿಸಲಾಗಿದೆ. ಪ್ರತಿ ಕೆಜಿ ಸಿಎನ್‌ಜಿ ದರ 59.01 ರೂ. ಮತ್ತು ಕೊಳವೆ ಮೂಲಕ ಮನೆಗಳಿಗೆ ಪೂರೈಕೆಯಾಗುತ್ತಿರುವ ಅಡುಗೆ ಅನಿಲ (ಪಿಎನ್‌ಜಿ) ಪ್ರತಿ ಕ್ಯೂಬಿಕ್‌ ಮೀಟರ್‌ಗೆ 36.61 ರೂಪಾಯಿ ಆಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News