×
Ad

ದೇವನಹಳ್ಳಿ: ಎರಡು ಲಾರಿಗಳ ನಡುವೆ ಢಿಕ್ಕಿ; ಓರ್ವ ಸಜೀವ ದಹನ

Update: 2022-03-25 09:40 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.25: ಎರಡು ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ವೇಳೆ ಕಾಣಿಸಿಕೊಂಡ ಬೆಂಕಿಯಿಂದ ಓರ್ವ ಸಜೀವ ದಹನಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ‌ ರಾಷ್ಟ್ರೀಯ ಹೆದ್ದಾರಿ 7ರ ಭುಕ್ತಿ ಡಾಬಾದ ಮುಂದೆ ಶುಕ್ರವಾರ ಮುಂಜಾನೆ ನಡೆದಿದೆ.

ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ಸಿಮೆಂಟ್ ಹೇರಿಕೊಂಡು ಅತೀ ವೇಗವಾಗಿ ಬರುತ್ತಿದ್ದ ಲಾರಿವೊಂದು ಭುಕ್ತಿ ಡಾಬಾ ಮುಂದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಡಿವೈಡರ್ ದಾಟಿದೆ. ಈ ವೇಳೆ ಆ ರಸ್ತೆಯಲ್ಲಿ ಬೆಂಗಳೂರಿನಿಂದ‌ ಚಿಕ್ಕಬಳ್ಳಾಪುರ ಮಾರ್ಗವಾಗಿ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಒಂದು ಲಾರಿ ಮಗುಚಿ ಬಿದ್ದಿದ್ದರೆ, ಇನ್ನೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ ಬೆಂಕಿ ಎರಡೂ ಲಾರಿಗಳನ್ನು ಆವರಿಸಿಕೊಂಡಿದ್ದು, ಲಾರಿಯೊಂದರ ಚಾಲಕ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News