×
Ad

ರಾಜಕೀಯ ನಿವೃತ್ತಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ...

Update: 2022-03-25 14:02 IST
ಸಿದ್ದರಾಮಯ್ಯ 

ಮೈಸೂರು: ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ  ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶುಕ್ರವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದರು. 

ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ.  ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ ಎಂದು ತಿಳಿಸಿದ್ದಾರೆ.

ವರುಣ, ಚಾಮುಂಡೇಶ್ವರಿ ಸೇರಿದಂತೆ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಎಲ್ಲ ಕ್ಷೇತ್ರಗಳೂ ಆದ್ಯತೆ, ಆದರೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆಯಲ್ಲಾ, ಈ ಬಗ್ಗೆ ಮುಂದೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು. 

ಇದನ್ನೂ ಓದಿ  ಹುಟ್ಟೂರಿನ ಜಾತ್ರೆಯಲ್ಲಿ ಸಂಗಡಿಗರೊಂದಿಗೆ ವೀರಕುಣಿತದ ಹೆಜ್ಜೆ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News