ತಲ್ಲೂರು: ಪ.ಜಾತಿ, ಪಂಗಡದ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಣೆ
Update: 2022-03-25 18:45 IST
ಕುಂದಾಪುರ, ಮಾ.25: ತಲ್ಲೂರು ಗ್ರಾಮ ಪಂಚಾಯತ್‌ನಿಂದ ಶೇ.25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣೆ ಗುರುವಾರ ತಲ್ಲೂರು ಗ್ರಾಪಂನ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ತಲ್ಲೂರು ಗ್ರಾಪಂ ಅಧ್ಯಕ್ಷೆ ಭೀಮವ್ವ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂನ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಉದಯ ಕುಮಾರ್ ತಲ್ಲೂರು, ತಲ್ಲೂರು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರೆಲ್ಲರೂ ಮನೆ ತೆರಿಗೆ ಹಾಗೂ ನೀರಿನ ತೆರಿಗೆಯನ್ನು ಬಾಕಿ ಉಳಿಸದೇ ಪಾವತಿಸಿದರೆ ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.
ಗ್ರಾಪಂ ಉಪಾಧ್ಯಕ್ಷ ಗಿರೀಶ್ ಎಸ್. ನಾಯ್ಕ್, ಸದಸ್ಯ ಚಂದ್ರದೇವಾಡಿಗ ಮಾತನಾಡಿದರು. ಗ್ರಾಪಂ ಸದಸ್ಯರು, ಗ್ರಾಪಂ ಕಾರ್ಯದರ್ಶಿ ರತ್ನ ಕೆ., ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.