ಪ್ರತಿ ವರ್ಷ ಮಾ.16ರಂದು ರೇಣುಕಾಚಾರ್ಯ ಜಯಂತಿ ಆಚರಣೆ: ಆದೇಶ ಹೊರಡಿಸಿದ ರಾಜ್ಯ ಸರಕಾರ

Update: 2022-03-25 14:38 GMT

ಬೆಂಗಳೂರು, ಮಾ.25: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಕೈಗೊಂಡಿರುವ ಸರಕಾರ, ಈ ಸಂಬಂಧ ಶುಕ್ರವಾರ ಸರಕಾರಿ ಆದೇಶ ಹೊರಡಿಸಿದೆ.

ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಾದ್ಯಂತ ಇವರು ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿದ್ದಾರೆ.

ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ನಾಡಿನ ಜನತೆಗೆ ಸಾರಿದವರು ರೇಣುಕಾಚಾರ್ಯರು. ಈ ಹಿನ್ನೆಲೆಯಲ್ಲಿ ಅವರ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರಕಾರಕ್ಕೆ ಮನವಿ ಸಲ್ಲಿಸಿತ್ತು. ಅದರ ಆಧಾರದ ಮೇಲೆ ಸರಕಾರದ ವತಿಯಿಂದ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಪ್ರತಿ ವರ್ಷ ಮಾರ್ಚ್ 16ರಂದು ರಾಜ್ಯಾದ್ಯಂತ ಆಚರಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News