ಎಸೆಸೆಲ್ಸಿ ಪರೀಕ್ಷೆ: ಸಮವಸ್ತ್ರ ಧರಿಸಿಯೇ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಸೂಚನೆ

Update: 2022-03-26 06:26 GMT

ಬೆಂಗಳೂರು, ಮಾ.26: ಸೋಮವಾರ(ಮಾ.28)ದಿಂದ ಆರಂಭಗೊಳ್ಳಲಿರುವ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಹಾಜರಾಗುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಸರಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಹಾಗೂ ಖಾಸಗಿ ಶಾಲೆಗಳಲ್ಲಿ ಅಂದರೆ ಅನುದಾನಿತ/ಅನುದಾನರಹಿತ ಶಾಲೆಗಳಲ್ಲಿ ಆಯಾ ಶಾಲಾಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸಮೂರ್ತಿ ಸುತ್ತೋಲೆಯಲ್ಲಿ  ಸೂಚಿಸಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯು ಮಾ.28ರಿಂದ ಎಪ್ರಿಲ್ 11ರವರೆಗೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News