ಸಚಿವ ಸಂಪುಟ ವಿಸ್ತರಣೆ | ವರಿಷ್ಠರು ಚರ್ಚೆಗೆ ಕರೆದಾಗ ದಿಲ್ಲಿಗೆ ತೆರಳುವೆ: ಸಿಎಂ ಬೊಮ್ಮಾಯಿ

Update: 2022-03-26 07:35 GMT

ಹುಬ್ಬಳ್ಳಿ, ಮಾ.26: ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ದಿಲ್ಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆಯಾಗಬೇಕು. ವರಿಷ್ಠರು ಕರೆದಾಗ ದಿಲ್ಲಿಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು

 ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸರಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಎಪ್ರಿಲ್ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಇದಲ್ಲದೆ ಎಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದು, ಸಹಕಾರ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News