×
Ad

ಮಂಗಳೂರು: ಯೆನೆಪೊಯ ಆಸ್ಪತ್ರೆ ವತಿಯಿಂದ ರಕ್ತದಾನ ಶಿಬಿರ

Update: 2022-03-26 18:37 IST

ಮಂಗಳೂರು : ನಗರದ ಕೋಡಿಯಾಲ್‌ಬೈಲ್‌ನ ಯೆನೆಪೊಯ ಸ್ಪೆಷಾಲಿಟಿ ಆಸ್ಪತ್ರೆ, ದೇರಳಕಟ್ಟೆಯ ಯೆನೆಪೊಯ ವೈದ್ಯಕೀಯ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಮಂಗಳೂರು ಶಾಖೆ ಮತ್ತು ಸ್ಥಳೀಯ ಕಾರ್ಪೊರೇಟರ್‌ಗಳ ಸಹಕಾರದಲ್ಲಿ ಶನಿವಾರ ಬಂದರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್‌ಕ್ರಾಸ್‌ನ  ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ವೈದ್ಯಾಧಿಕಾರಿ ಡಾ.ಜೆ.ಎನ್ ಭಟ್, ಕಾರ್ಪೊರೇಟರ್  ಝೀನತ್  ಸಂಶುದ್ದೀನ್, ಮನಪಾ ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ, ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಅಧ್ಯಕ್ಷ ಡಿಎಂ ಅಸ್ಲಂ, ಯೆನೆಪೊಯ ವೈದ್ಯಕೀಯ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಪೂನಂ ಆರ್. ನಾಯಕ್, ರೆಡ್‌ಕ್ರಾಸ್‌ನ ಜಿಲ್ಲಾ ಸಂಯೋಜಕ ಎಂ.ಆರ್. ಪ್ರವೀಣ್ ಕುಮಾರ್, ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಭಾಸ್ಕರ್ ಅರಸ ಉಪಸ್ಥಿತರಿದ್ಧರು.

ಶಿಬಿರದಲ್ಲಿ ಅಧಿಕ ಸಂಖ್ಯೆಯಲ್ಲಿ ದಾನಿಗಳು ಪಾಲ್ಗೊಂಡಿದ್ದು, ಎಲ್ಲರಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News