×
Ad

ಉಚಿತ ಆಹಾರಧಾನ್ಯ ವಿತರಣೆ ಯೋಜನೆ 'ಪಿಎಂಜಿಕೆವೈ' ಯನ್ನು ಆರು ತಿಂಗಳ ಕಾಲ ವಿಸ್ತರಿಸಿದ ಕೇಂದ್ರ

Update: 2022-03-26 20:24 IST

ಹೊಸದಿಲ್ಲಿ: ಉಚಿತ ಆಹಾರಧಾನ್ಯ ವಿತರಣೆ ಯೋಜನೆ 'ಪಿಎಂಜಿಕೆವೈ' ಯನ್ನು ಕೇಂದ್ರ ಸರ್ಕಾರವು ಆರು ತಿಂಗಳವರೆಗೆ ವಿಸ್ತರಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಶನಿವಾರ ಹೇಳಿದ್ದಾರೆ.  

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆಯನ್ನು ಸರ್ಕಾರ ಸೆಪ್ಟೆಂಬರ್ 2022 ರವರೆಗೆ ವಿಸ್ತರಿಸಿದೆ ಎಂದು ಆಹಾರ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ.

COVID-19 ಸಾಂಕ್ರಾಮಿಕ ರೋಗದ ಅಂತ್ಯದ ಹೊರತಾಗಿಯೂ ಯೋಜನೆಯ ವಿಸ್ತರಣೆಯು ಬಡವರ ಬಗ್ಗೆ ಮೋದಿ ಸರ್ಕಾರಕ್ಕಿರುವ ಸಂವೇದನಾಶೀಲತೆಯನ್ನು ತೋರಿಸುತ್ತದೆ ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

ಮಾರ್ಚ್ 2020 ರಲ್ಲಿ, ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ 80 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಕೇಂದ್ರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಜಾರಿಗೆ ತಂದಿತ್ತು.

ಈ ಯೋಜನೆಯಡಿ ಕೇಂದ್ರವು ಬಡವರಿಗೆ ತಿಂಗಳಿಗೆ 5 ಕೆಜಿ ಆಹಾರಧಾನ್ಯವನ್ನು ಉಚಿತವಾಗಿ ನೀಡುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News