ಚಾಮುಂಡಿ ಬೆಟ್ಟದಲ್ಲಿ ಹಿಂದೂಯೇತರರ ಅಂಗಡಿಗಳನ್ನು ತೆರವುಗೊಳಿಸುವಂತೆ ಸಂಘಪರಿವಾರದಿಂದ ಮನವಿ

Update: 2022-03-26 16:36 GMT

ಮೈಸೂರು, ಮಾ.26: ಮೈಸೂರಿನ ಧಾರ್ಮಿಕ ಕ್ಷೇತ್ರ ಚಾಮುಂಡಿ ಬೆಟ್ಟದಲ್ಲಿ ಬಟ್ಟೆ ಅಂಗಡಿ ಸೇರಿದಂತೆ 5 ಅಂಗಡಿಗಳು ಮುಸ್ಲಿಮ್ ಸಮುದಾಯಕ್ಕೆ ಸೇರಿದ್ದು ಆ ಅಂಗಡಿಗಳನ್ನು ತರವುಗೊಳಿಸಬೇಕು ಎಂದು ಸಂಘಪರಿವಾರದ ಕಾರ್ಯಕರ್ತರು ಚಾಮುಂಡಿ ಬೆಟ್ಟದ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಉಚ್ಚ ನ್ಯಾಯಾಲಯದ ಆದೇಶ ಪಾಲಿಸುವುದರಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವುದು, ಬಂದ್ ಮಾಡಿಸುತ್ತಿರುವುದು ಹಿಂದೂ ಸಮಾಜದಲ್ಲಿ ಆತಂಕ ಸೃಷ್ಟಿ ಮಾಡಿದ್ದು,  ದೇವಸ್ಥಾನದ ಸುತ್ತಮುತ್ತಲ ಹಿಂದುಗಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತವಾಗಿದೆ. ಇಂತಹ ಘಟನೆಗಳು ಹಿಂದೂ ಆಸ್ತಿಕರ ಬಿಕೆಗೆ ಘಾಸಿಯುಂಟು ಮಾಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. 

ಚಾಮುಂಡಿ ಬೆಟ್ಟದ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಮುಸಲ್ಮಾನರಿಗೆ ಮಳಿಗೆಗಳನ್ನು ನೀಡಿರುವ ಬಗ್ಗೆ ಪರಿಶೀಲಿಸಿ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಪ್ರದೀಪ್ ಕುಮಾರ್ ವಿ.ಜಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News