×
Ad

ಹುಬ್ಬಳ್ಳಿಗೆ ಆಗಮಿಸಿದ ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸ್ವಾಗತ

Update: 2022-03-26 23:50 IST

ಹುಬ್ಬಳ್ಳಿ, ಮಾ.26: ಧಾರವಾಡ ಜಿಲ್ಲೆಯ ಕರ್ನಾಟಕ ರಾಜ್ಯ ಕಾನೂನು ವಿವಿಯ 5ನೆ ಘಟಿಕೋತ್ಸವದಲ್ಲಿ ಭಾಗವಹಿಸಲು ಶನಿವಾರ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸ್ವಾಗತಿಸಲಾಯಿತು.

ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಕಾನೂನು ವಿವಿ ಕುಲಪತಿ ಪ್ರೊ.ಪಿ.ಈಶ್ವರಭಟ್, ಕೃಷಿ ವಿವಿ ಕುಲಪತಿ ಪ್ರೊ .ಎಂ.ಬಿ.ಚೆಟ್ಟಿ, ಕಾನೂನು ವಿವಿ ಕುಲಸಚಿವ ಮಹಮದ್ ಜುಬೇರ್, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಡಾ.ಎನ್.ಆರ್.ಪುರುಷೋತ್ತಮ, ತಹಸೀಲ್ದಾರ ಶಶಿಧರ ಮಾಡ್ಯಾಳ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳೊಂದಿಗೆ ಸಂವಾದ: ಧಾರವಾಡ ಜಿಲ್ಲೆಯ ಕೃಷಿ ವಿವಿಗೆ ಭೇಟಿ ನೀಡಿದ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಗಳೂ ಆದ ಥಾವರಚಂದ್ ಗೆಹ್ಲೋತ್ ಅವರು ಕೃಷಿ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿಶ್ವವಿದ್ಯಾಲಯದ ಪ್ರಯೋಗಾಲಯಗಳನ್ನು ವೀಕ್ಷಿಸಿದರು. ಇದಕ್ಕೂ ಮುನ್ನ ರಾಜ್ಯಪಾಲರಿಗೆ ಗೌರವ ರಕ್ಷೆ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News