ʼಚಿತ್ರಸಂತೆ - 2022ʼ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ
Update: 2022-03-27 12:42 IST
ಬೆಂಗಳೂರು: ಚಿತ್ರಕಲಾ ಪರಿಷತ್ ಆಯೋಜಿಸಿದ್ದ 'ಚಿತ್ರಸಂತೆ - 2022ʼ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಅಶ್ವತ್ಥನಾರಾಯಣ, ಎಸ್ ಟಿ ಸೋಮಶೇಖರ್, ಶಾಸಕ ರಿಝ್ವಾನ್ ಅರ್ಷದ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್ ಶಂಕರ್ , ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿತ್ರಸಂತೆಯಲ್ಲಿ ಕಲಾವಿದರ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಮಾಡಲಾಗಿತ್ತು.