×
Ad

ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮೇಲೆ ದುಷ್ಕರ್ಮಿಯಿಂದ ಹಲ್ಲೆ: ಆರೋಪಿ ಪೊಲೀಸ್‌ ವಶಕ್ಕೆ

Update: 2022-03-27 20:04 IST
Photo: ndtv.com

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ತಮ್ಮ ತವರು ಪಟ್ಟಣ ಭಕ್ತಿಯಾರ್‌ಪುರದಲ್ಲಿ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸದ್ಯ, ಸಿಸಿಟಿವಿ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ndtv.com ವರದಿ ಮಾಡಿದೆ.

ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಸ್ವಾತಂತ್ರ ಹೋರಾಟಗಾರ ಶಿಲಾಭದ್ರ ಯಾಜಿ ಪ್ರತಿಮೆಗೆ ಗೌರವ ಸಲ್ಲಿಸುತ್ತಿರುವಾಗ ಈ ಘಟನೆ ನಡೆದಿದೆ. ಹಿಂದಿನಿಂದ ಬಂದ ದುಷ್ಕರ್ಮಿ ಮುಖ್ಯಮಂತ್ರಿ ಮೇಲೆ ದಾಳಿ ಮಾಡಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿಗಳು ಆತನನ್ನು ಹಿಡಿದು ಹಿಂದಕ್ಕೆ ಎಳೆದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News