×
Ad

ಅಖಿಲ ಭಾರತ ಮುಷ್ಕರಕ್ಕೆ ರಾಜ್ಯದಲ್ಲಿ ಬೆಂಬಲ

Update: 2022-03-27 20:58 IST
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಮಾ. 27: ಮಾ.28 ಮತ್ತು 29ರಂದು ಅಖಿಲ ಭಾರತ ಮುಷ್ಕರಕ್ಕೆ ರಾಜ್ಯದಲ್ಲಿರುವ ಕಾರ್ಮಿಕ ಸಂಘಟನೆಗಳು, ಬ್ಯಾಂಕ್ ನೌಕರರ ಸಂಘಟನೆಗಳು, ರೈತ ಸಂಘಟನೆಗಳು ಬೆಂಬಲ ಸೂಚಿಸಿವೆ. 

ಕಾರ್ಪೊರೇಟ್ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದು ಹಾಗೂ ರೈತರು ಮತ್ತು ಕೂಲಿಕಾರರನ್ನು ರಕ್ಷಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು. ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾನೂನುಗಳ ರದ್ದತಿಗಾಗಿ ಒತ್ತಾಯಿಸಲಾಗುವುದು. ಬೆಲೆ ಏರಿಕೆ ನಿಯಂತ್ರಣಕ್ಕಾಗಿ ರೈತ ಹಾಗೂ ಕೂಲಿಕಾರರ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು. 26 ಸಾವಿರ ರೂಪಾಯಿ ಸಮಾನ ಕನಿಷ್ಟ ವೇತನ ಸಿಗಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣ ತಡೆಯಬೇಕು. ಅಂಗನವಾಡಿ, ಬಿಸಿಯೂಟ ಮತ್ತು ಕಾರ್ಯಕರ್ತರನ್ನು ಕೆಲಸಗಾರರೆಂದು ಗುರುತಿಸಿ ನ್ಯಾಯಬದ್ಧ ಸವಲತ್ತುಗಳನ್ನು ನೀಡಬೇಕು ಎಂಬ ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಹೋರಾಟ ಮಾಡುತ್ತಿರುವುದಾಗಿ ಕಾರ್ಮಿಕ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು)ನ ಸದಸ್ಯೆ ಮೈತ್ರಿ ಕೃಷ್ಣನ್ ತಿಳಿಸಿದರು.

ಕಾರ್ಮಿಕ ಮುಖಂಡ ಕೆ.ಪ್ರಕಾಶ್ ಮಾತನಾಡಿ, ಸಾರಿಗೆ ನಿಗಮಗಳಲ್ಲಿ ಕಾರ್ಯಚರಣೆ ನಡೆಸುತ್ತಿರುವ ವಾಹನಗಳು ಎಂದಿನಂತೆ ಸಂಚಾರ ನಡೆಸಲಿದ್ದು, ಕೈಗಾರಿಕೆಗಳು, ಬ್ಯಾಂಕ್‍ಗಳು ಸಂಪೂರ್ಣ ಬಂದ್ ಆಗಲಿವೆ. ಕಾರ್ಮಿಕರು, ರೈತರು ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News